

ಪುತ್ತೂರು: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಕಬಕದ ಮಹಮ್ಮದ್ ಮುಸ್ತಫಾ(36) ಎಂದು ಗುರುತಿಸಲಾಗಿದೆ.
ಆರೋಪಿ ಮುಕ್ರಂಪಾಡಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ 14 ಗ್ರಾಂ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದನು.
ಆರೋಪಿಯ ವಿರುದ್ಧ ಈಗಾಗಲೇ ಪೋಕ್ಸೋ ಪ್ರಕರಣ ಸಹ ದಾಖಲಾಗಿ, ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಸಹ ಮುಗಿಸಿದ್ದ ಎಂದು ತಿಳಿದು ಬಂದಿದೆ. 2024 ರಲ್ಲಿಯೂ ಈತನ ವಿರುದ್ಧ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಪ್ರಕರಣಗಳು ದಾಖಲಾಗಿದ್ದವು.






