November 24, 2025
WhatsApp Image 2025-11-22 at 9.17.18 AM

ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ನಾರಾಯಣ ಶಿಂಧೆ ಎಂಬುವವರು ತನ್ನ ತಂದೆ ವಿಠ್ಠಲ ಶಿಂಧೆ, ಮಕ್ಕಳಾದ ಶಿವಕುಮಾರ್ ಶಿಂಧೆ ಹಾಗೂ ಶ್ರೀನಿಧಿ ಶಿಂಧೆ ಜೊತೆ ಗ್ರಾಮದ ಹೊರವಲಯದಲ್ಲಿರುವ ಯಲ್ಲಮನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಗ ಶಶಿಕುಮಾರ್ 6 ನೇ ತರಗತಿಯಲ್ಲಿ ಓದುತ್ತಿದ್ದರು. ಮಗಳು ಶ್ರೀನಿಧಿ 5 ನೇ ತರಗತಿ ಓದುತ್ತಿದ್ದಳು. ಶಾಲಾ ಸಮವಸ್ತ್ರದಲ್ಲೇ ಮಕ್ಕಳ ಜೊತೆಗೆ ತಂದೆಯನ್ನು ಕರೆದುಕೊಂಡು ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply