February 12, 2026
WhatsApp Image 2025-11-22 at 3.41.06 PM

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ. ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಅವರು ಭಾಗವಹಿಸಲಿರುವುದನ್ನು ಪ್ರಧಾನಮಂತ್ರಿಗಳ ಕಚೇರಿ (ಪಿಎಂಒ) ದೃಢಪಡಿಸಿದೆ.

ಉಡುಪಿಯಲ್ಲಿ ಈ ಹಿಂದೆ ಯೋಜಿಸಲಾಗಿದ್ದ ರೋಡ್ ಶೋ ರದ್ದಾಗಿದೆ. ಪ್ರಧಾನಿ ಮೋದಿ ಮಧ್ಯಾಹ್ನ 12 ಗಂಟೆಗೆ ನೇರವಾಗಿ ಕೃಷ್ಣ ಮಠಕ್ಕೆ ಭೇಟಿ ನೀಡಿ, ಬಳಿಕ ಸುವರ್ಣತೀರ್ಥ ಮಂಟಪ ಮತ್ತು ಕನಕನ ಕಿಂಡಿಗೆ ಸ್ವರ್ಣ ಕವಚ ಲೋಕಾರ್ಪಣೆ ಮಾಡಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

About The Author

Leave a Reply