December 21, 2025
WhatsApp Image 2025-11-26 at 11.14.18 AM

 ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.

ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ ಎಸ್ ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು ಎಂದು ತಿಳಿದು ಬಂದಿದೆ. 2025 ಏಪ್ರಿಲ್ 14 ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆ ಅಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು ಬಿ ಆರ್ ಪಿ ಯ ಕೆಪಿಸಿಎಲ್ ನಲ್ಲಿ ಲತಾಪತಿ ಗುರುರಾಜ್ ಎಇಇ ಆಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ನಾಲೆಗೆ ಹಾರಿ ನವ ವಿವಾಹಿತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಲ್ಲದೆ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿದ್ದು ಪತಿ ಹಾಗೂ ಮನೆಯವರ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ನವೆಂಬರ್ 23ರಂದು ಪಿ ಲತಾ ನಾಲೆಗೆ ಹಾರಿದ್ದಾರೆ. ಸದ್ಯ ಲತಾ ಶವಕ್ಕಾಗಿ ಇದೀಗ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಲತಾ ಪತಿ ಹಾಗೂ ಆತನ ಕುಟುಂಬಸ್ಥರು ನಾಪತ್ತೆಯಾಗಿದ್ದಾ

About The Author

Leave a Reply