

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಸುಮಾರು 65 ವರ್ಷದ ಮಹಿಳೆಯ ಮೃತದೇಹ ಇದಾಗಿದೆ. ಇಂದು ಬೆಳಗ್ಗೆ ನದಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದು, ಅದನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿರುವುದಾಗಿ ಬಂಟ್ವಾಳ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಬಂಧಪಟ್ಟವರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.






