November 28, 2025
WhatsApp Image 2025-11-27 at 1.29.09 PM

ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ ಹಾಗಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಕರೆದು ಮಾತನಾಡುತ್ತಾರೆ. ಹೈಕಮಾಂಡ್ ಏನೆ ತೀರ್ಮಾನ ಮಾಡಿದರು ಅದಕ್ಕೆ ನಾವೆಲ್ಲ ಬದಲಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಅಲ್ಲದೆ ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟ್ ಬೀಸಿದರು.

ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ, ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಲಿದ್ದಾರೆ ಎನ್ನಲಾಗಿದೆ. ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಕರೆದು ಮಾತನಾಡಲಿದ್ದಾರೆ ಅಂತ ತಿಳಿಸಿದ ಅವರು, ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನದ ಬಗ್ಗೆ ನಾವು ಒಪ್ಪುತ್ತೇವೆ ಅಂತ ಹೇಳಿದರು.

ಇನ್ನೂ ಈ ನಡುವೆ ಖರ್ಗೆ ಅವರು ಹೇಳಿದ ಮೇಲೆ ಅವರ ಮಾತಿಗಿಂತ ಬೇರೆ ಇಲ್ಲ ಅಂಥ ಸಚಿವ ದಿನೇಶ್‌ ಗುಂಡ್‌ರಾವ್ ಹೇಳಿದ್ದಾರೆ.
ಈ ನಡುವೆ ರೈತರಿಗೆ ಹೆಚ್ಚುವರಿ ಯಾಗಿ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ನೀಡಲಾಗುತ್ತಿದ್ದು, ಪ್ರತಿ ಹೆಗ್ಟಗೆ 8,000 ಬೆಳೆ ಹಾನಿ ಪರಿಹಾರ ನೀಡಲಾಗುತ್ತೆ ಎಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಬೆಳೆ ಹಾನಿ ಪರಿಹಾರ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಈ ನಡುವೆ ಹೈಮಾಂಡ್‌ ನಿರ್ಧಾರಕ್ಕೆ ನಾನು ಬದ್ದ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದೆಹಲಿಗೆ ತೆರಳುವ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಎಲ್ಲವನ್ನು ಹೈಕಮಾಂಡ್ ಸಮ್ಮುಖದಲ್ಲಿ ಚರ್ಚಿಸುತ್ತೇನೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಮಾತಾಡ್ತೀನಿ. ಹೈ ಕಮಾಂಡ್ ಜೊತೆ ಕೂತು ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುತ್ತೆ. ಸಭೆಯಲ್ಲಿ ರಾಹುಲ್ ಗಾಂಧಿ ಸಹ ಇರುತ್ತಾರೆ. 3-4 ಪ್ರಮುಖ ನಾಯಕರನ್ನು ಕರೆಸಿ ಚರ್ಚಿಸುತ್ತೇನೆ. ಎಲ್ಲರ ಸಮ್ಮುಖದಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಎಂದರು.

ಈ ನಡುವೆ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದ ಮಾತಿಗೆ ಮಾಧ್ಯಮಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಕರೆದರೆ ದೆಹಲಿಗೆ ಹೋಗುವೆ ಅಂತ ತಿಳಿಸಿದರು. ಇನ್ನೂ ಈ ನಡುವೆ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿರುವ ಹೈಕಮಾಡ್‌ ಇನ್ನೇರಡು ದಿನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಕರೆದು ಮಾತನಾಡಲಿದ್ದಾರೆ ಎನ್ನಲಾಗಿದೆ.

ಈ ಸಮಯದಲ್ಲಿ ಪ್ರಸಕ್ತ ರಾಜಕೀಯ ಬಿಕ್ಕಟ್ಟು ಸೇರಿದಂತೆ ಇತರೆ ಮಾಹಿತಿಗಳನ್ನು ಪಾರ್ಟಿಯ ಹಿರಿಯ ನಾಯಕರುಗಳ ಜೊತೆಗೆ ಚರ್ಚಿಸುತ್ತ ಅಂತಿಮ ನಿರ್ಧಾರಕ್ಕೆ ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬರಲಿದ್ದಾರೆ ಎನ್ನಲಾಗಿದೆ. ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿದ್ದು, ಇದು ಹೊಸ ಚರ್ಚೆಗೆ ಕಾರಣವಾಗಿದೆ. ಇದಲ್ಲದೇ ಇಂದು ರಾಹುಲ್‌ ಗಾಂಧಿಯನ್ನು ಮಲ್ಲಿಕಾರ್ಜುನ ಖರ್ಗೆಯವರು ಭೇಟಿಯಾಗಲಿದ್ದು, ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

About The Author

Leave a Reply