

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರುಗೊಂಡಿದೆ.
ಪಡುವನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಅಬ್ದುಲ್ ಹಾಶೀಮ್ (34) ಎಂಬಾತನು ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್ ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ ಟಿಸಿಯೆಂದು ನಂಬಿಸಿ, ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಕಲಂ 417, 419, 467, 468, 471 ಐ. ಪಿ. ಸಿ ಪ್ರಕರಣ ದಾಖಲಾಗಿತ್ತು.
ಸದ್ರಿ ಪ್ರಕರಣದ ತನಿಖೆ ನಡೆಸಲಾಗಿದ್ದು ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಿರ್ಯಾದುದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸುವ ಉದ್ದೇಶದಿಂದ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿದ ಆರೋಪಿ ಅಬ್ದುಲ್ ಹಾಶೀಮ್ (34)ನನ್ನು ನ.6ರಂದು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು. ಇದೀಗ ಆರೋಪಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.ಆರೋಪಿ ಪರ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್ ವಾದಿಸಿದ್ದರು.






