January 17, 2026
AA-291125-cmdcm

ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್ ಮೊನ್ನೆ ಪೊನ್ನಣ್ಣರಿಗೆ ಕರೆ ಮಾಡಿದ್ದರು. ಡಿ.ಕೆ.ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಕರೆಯಿರಿ ಎಂದು ಹೇಳಿದ್ದರು.

ಡಿ.ಕೆ. ಶಿವಕುಮಾರ್ ಅವರಿಗೂ ಇದನ್ನು ಹೇಳಿದ್ದರು. ಡಿ.ಕೆ.ಶಿವಕುಮಾರ್ ಅವರು ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಇನ್ನೊಂದಿನ ನಿಮ್ಮ ಮನೆಗೆ ಊಟಕ್ಕೆ ಬರ್ತಿನಿ ಅಂತ ಹೇಳಿದ್ದೇನೆ ಎಂದರು.

ನಾವು ಇಂದು ಮೀಟಿಂಗ್ ಮಾಡಿದ ಉದ್ದೇಶ, ಕೆಲವು ಗೊಂದಲಗಳು ನಿರ್ಮಾಣ ಆಗಿದ್ದೇವೆ. ಒಂದು ತಿಂಗಳಿನಿಂದ ಈ ಗೊಂದಲಗಳು ಶುರುವಾಗಿವೆ. ನಾವು ಇಬ್ಬರು ಮಾತನಾಡಿದ್ದೇವೆ. ನಮ್ಮ ಉದ್ದೇಶ 2028 ರ ಚುನಾವಣೆ, ಸ್ಥಳೀಯ ಸಂಸ್ಥೆ, ತಾಲೂಕು, ಜಿಲ್ಲಾ, ಗ್ರಾಮಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ.

2023 ರ ವಿಧಾನಸಭೆ ಚುನಾವಣೆ ಹೇಗೆ ನಾವಿಬ್ಬರು ಚರ್ಚೆ ಮಾಡಿದ್ದೇವೆ ಹಾಗೆಯೇ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ. ಒಟ್ಟಿಗೆ ಹೋಗುತ್ತೇವೆ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇಲ್ಲ. ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಶುರುವಾಗಲಿದೆ. ವಿರೋಧ ಪಕ್ಷದವರನ್ನು ಬಹಳ ಸಮರ್ಥವಾಗಿ ಎದುರಿಸುತ್ತೇವೆ. ಸುಳ್ಳು ಅಪಪ್ರಚಾರಗಳನ್ನು, ಸುಳ್ಳುಗಳನ್ನು, ಸುಳ್ಳು ಆರೋಪಗಳನ್ನು ಮಾಡುವುದು ಬಿಜೆಪಿಯ ಚಾಳಿ, ಹೀಗಾಗಿ ಇವರನ್ನು ಸಮರ್ಥವಾಗಿ ನಾವಿಬ್ಬರು ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ನಾವಿಬ್ಬರು ಕೇಳುತ್ತೇವೆ. ಇದೀಗ ಇರುವ ಗೊಂದಲಗಳನ್ನು ಪರಿಹರಿಸುವಂತೆ ಹೈಕಮಾಂಡ್ ಸೂಚನೆ ನೀಡಿದ್ದಾರೆ. ಹೀಗಾಗಿ ನಾಳೆಯಿಂದ ಯಾವುದೇ ಗೊಂದಲ ಇರಲ್ಲ. ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿರಬಹುದು. ಕೆಲವರು ಬಂದು ನನಗೆ ಇದನ್ನು ಹೇಳಿದ್ದಾರೆ ಎಂದರು.

ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ರಾಜಕೀಯವಾಗಿ ನಮ್ಮಿಬ್ಬರದು ಒಂದೇ ತೀರ್ಮಾಣ, ನಮ್ಮಲ್ಲಿ ಯಾವ ಗುಂಪುಗಾರಿಕೆ ಇಲ್ಲ. ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಉಪಾಹಾರಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಈ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಕೂಡ ಹಾಜರಿದ್ದರು.

About The Author

Leave a Reply