

ಬೆಂಗಳೂರು : ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ಡಿ.1ರಂದು ನಿಧನರಾಗಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ಡಿಸೆಂಬರ್ 3ರಂದು ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆ ಚಾಮುಂಡಿ ದರ್ಶನಕ್ಕೆಂದು ದೇವರಾಜ್ ತೆರಳಿದ್ದರು. ಈ ವೇಳೆ ತೀವ್ರ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾತ್ತು. ಆ ನಂತರ ಹೆಚ್ಚಿನ ಚಿಕಿಕತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಆರ್‌ವಿ ದೇವರಾಜ್ ಕೊನೆಯುಸಿರೆಳೆದಿದ್ದಾರೆ.






