

ನವದೆಹಲಿ : ಮಾಜಿ ಸಿಎಂ ಬಿಎಸ್‌ವೈ (BSY) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.ಇದೀಗ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್
ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಹೈಕೋರ್ಟ್ ನ 2025 ಫೆಬ್ರವರಿ 7ರ ತೀರ್ಪುನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. ಬಿ.ಎಸ್ ಯಡಿಯೂರಪ್ಪ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ. ಬಿ.ಎಸ್ ಯಡಿಯೂರಪ್ಪ ಪರ ಹಿರಿಯ ವಕೀಲರಿಂದ ವಾದ ಮಂಡನೆ ನಡೆಸಿದರು. ಹೈಕೋರ್ಟ್ ನಲ್ಲಿ ಹೊಸದಾಗಿ ತೀರ್ಮಾನಿಸಲು ಏಕೆ ಸೂಚಿಸಬಾರದು ಎಂದು ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಬಳಿಕ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶ ಹೋರಾಡಿಸಿತು.
ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಏನಿದು ಪ್ರಕರಣ?
ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಿದ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಗಳ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024ರಲ್ಲಿ ಸಿಐಡಿ 750 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.






