February 14, 2026
WhatsApp Image 2025-12-12 at 3.08.57 PM

ಮೂಡುಬಿದಿರೆ: ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ.19 ಸಾವಿರ ರೂ.ವನ್ನು ದೋಚಿ ಪರಾರಿಯಾಗಿರುವ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ವರದಿಯಾಗಿದೆ.

ಈದು ಗ್ರಾಮದ ಮುಹಮ್ಮದ್ ಹಣ ಕಳೆದುಕೊಂಡವರು ಎಂದು ತಿಳಿದು ಬಂದಿದೆ.

ಮೂಡುಬಿದಿರೆ ಮಾರುಕಟ್ಟೆಯಲ್ಲಿ ಹಣ್ಣು ಹಂಪಲು ವ್ಯಾಪಾರಿಯಾಗಿರುವ ಮುಹಮ್ಮದ್ ಮಂಗಳೂರಿನಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಈದುನಿಂದ ರಿಕ್ಷಾದಲ್ಲಿ ಹೊರಟಿದ್ದರು. ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡ ಇವರ ರಿಕ್ಷಾವನ್ನು ಅಡ್ಡಗಟ್ಟಿ, ಬೆದರಿಸಿ 19 ಸಾವಿರ ರೂ. ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply