January 17, 2026
WhatsApp Image 2025-12-14 at 9.28.12 AM

ಬಂಟ್ವಾಳ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಸೆರೆಯಾಗಿರುವ ಆರೋಪಿಗಳು.

ಡಿಸೆಂಬರ್ 13ರ ಸಂಜೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಬಳಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ. ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದು, ಪರಿಶೀಲನೆಯ ವೇಳೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ನಿರ್ಜನ ಪ್ರದೇಶದಲ್ಲಿ KA-19-MN-3664 ಸಂಖ್ಯೆಯ ಕಾರು ಹಾಗೂ KA-19-AE-0166 ಸಂಖ್ಯೆಯ ಆಟೋರಿಕ್ಷಾ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅವರು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ತಪಾಸಣೆ ವೇಳೆ ಕಾರಿನಿಂದ 450 ಗ್ರಾಂ ಹಾಗೂ ಆಟೋರಿಕ್ಷಾದಿಂದ 360 ಗ್ರಾಂ ಸೇರಿ ಒಟ್ಟು 810 ಗ್ರಾಂ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ.

About The Author

Leave a Reply