December 17, 2025
WhatsApp Image 2025-12-16 at 10.54.41 AM

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಮಹಿಳಾ ವೈದ್ಯರ ಮುಖದ ಮೇಲಿನ ಮುಸುಕನ್ನ ತೆಗೆದಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಗಂಭೀರ ಪ್ರಶ್ನೆಗಳನ್ನು ಎತ್ತಿವೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದ್ದು, ವಿರೋಧ ಪಕ್ಷಗಳಿಂದ ಬಲವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳಾ ವೈದ್ಯೆ ನುಸ್ರತ್ ಪ್ರವೀಣ್ ಅವರಿಗೆ ನೇಮಕಾತಿ ಪತ್ರ ನೀಡುವಾಗ ಅವರ ಹಿಜಾಬ್ ತೆಗೆದು ನೋಡುತ್ತಿರುವುದನ್ನು ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಇಂದು ನಡೆದ ನೇಮಕಾತಿ ಪತ್ರ ವಿತರಣಾ ಸಮಾರಂಭದ ವಿಡಿಯೋ ಎಂದು ಹೇಳಲಾಗಿದೆ. ಆರ್‌ಜೆಡಿ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಪುಟದಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಮುಖ್ಯಮಂತ್ರಿಯವರ ವರ್ತನೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಸಿಎಂ ನಿತೀಶ್ ಕುಮಾರ್ ವಿವಾದಗಳಿಂದ ಸುತ್ತುವರೆದಿದ್ದಾರೆ.

ನಿತೀಶ್ ಕುಮಾರ್ ಬಿಹಾರದ ಗೃಹ ಇಲಾಖೆಯನ್ನು ಏಕೆ ತೊರೆದರು?
ಈ ವಿಷಯದ ಬಗ್ಗೆ ಆರ್‌ಜೆಡಿ ನಾಯಕ ಮೃತ್ಯುಂಜಯ್ ತಿವಾರಿ ನಿತೀಶ್ ಕುಮಾರ್ ಅವರನ್ನ ಗುರಿಯಾಗಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ನಿರಂತರವಾಗಿ ಮಹಿಳೆಯರನ್ನ ಅವಮಾನಿಸುತ್ತಿದ್ದಾರೆ ಮತ್ತು ಅವ್ರು ಇನ್ಮುಂದೆ ಬಿಹಾರವನ್ನ ನಿರ್ವಹಿಸುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು. ಇಂತಹ ನಡವಳಿಕೆಯು ಸಾಂವಿಧಾನಿಕ ಹುದ್ದೆಯನ್ನ ಹೊಂದಿರುವ ವ್ಯಕ್ತಿಗೆ ಯೋಗ್ಯವಲ್ಲ ಎಂದು ಆರ್‌ಜೆಡಿ ಆರೋಪಿಸಿದೆ.

ಆರ್‌ಜೆಡಿ ವಕ್ತಾರ ಎಜಾಜ್ ಅಹ್ಮದ್ ಕೂಡ ಈ ವಿಷಯಕ್ಕೆ ಪ್ರತಿಕ್ರಿಯಿಸಿ, ಪಕ್ಷವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಹೇಳಿದ್ದಾರೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ, ನಿತೀಶ್ ಕುಮಾರ್ ಅವರ ಮಾನಸಿಕ ಸ್ಥಿತಿಯನ್ನು ಪ್ರಶ್ನಿಸಲಾಗುತ್ತಿದೆ ಎಂದು ಆರ್‌ಜೆಡಿ ಬರೆದಿದೆ. ಈ ನಡವಳಿಕೆ ಮಹಿಳೆಯರ ಘನತೆಗೆ ವಿರುದ್ಧವಾಗಿದೆ ಎಂದು ಪೋಸ್ಟ್‌’ನಲ್ಲಿ ಹೇಳಲಾಗಿದೆ.

ಕಾಂಗ್ರೆಸ್ ಪಕ್ಷವೂ ಈ ವಿಡಿಯೋಗೆ ತೀವ್ರವಾಗಿ ಪ್ರತಿಕ್ರಿಯಿಸಿದೆ. ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ, ಮಹಿಳಾ ವೈದ್ಯರೊಬ್ಬರು ತಮ್ಮ ನೇಮಕಾತಿ ಪತ್ರವನ್ನ ಸ್ವೀಕರಿಸಲು ಬಂದಾಗ, ಮುಖ್ಯಮಂತ್ರಿ ತಮ್ಮ ಹಿಜಾಬ್ ಎಳೆದಿದ್ದಾರೆ ಎಂದು ಬರೆದಿದೆ. ಮುಖ್ಯಮಂತ್ರಿಗಳು ಸಾರ್ವಜನಿಕ ವೇದಿಕೆಯಲ್ಲಿ ಈ ರೀತಿ ವರ್ತಿಸಿದರೆ ಮಹಿಳಾ ಸುರಕ್ಷತೆಯ ಬಗ್ಗೆ ಯಾವ ಸಂದೇಶ ರವಾನೆಯಾಗುತ್ತದೆ ಎಂದು ಕಾಂಗ್ರೆಸ್ ಪಕ್ಷ ಪ್ರಶ್ನಿಸಿದೆ. ಈ ಘಟನೆಗಾಗಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಕ್ಷವು ಒತ್ತಾಯಿಸಿದೆ.

About The Author

Leave a Reply