December 17, 2025
WhatsApp Image 2025-12-17 at 9.33.22 AM

ಮೂಡುಬಿದಿರೆ: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ ಒಬ್ಬನನ್ನು ಬೆನ್ನಟ್ಟಿ ಮೂಡುಬಿದಿರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.

ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ.‌ ನಟೋರಿಯಸ್ ರೌಡಿ ತೌಸೀಪ್ ಮೂಡುಬಿದಿರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗಿದ್ದರು. ಮೂಡುಬಿದಿರೆ ಹೊರವಲಯದ ಕೊಡಂಗಲ್ಲು ಸಮೀಪ ತೌಸೀಪ್ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಆರೋಪಿಯ ಕಾರನ್ನು ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಿಂಬಾಲಿಸಿದ್ದರು. ಪೊಲೀಸರು ಹಿಂಬಾಲಿಸುತ್ತಿರುವ ಬಗ್ಗೆ ಅರಿತ ತೌಸೀಪ್‌ ತನ್ನ ಕಾರನ್ನು ಅತಿ ವೇಗದಲ್ಲಿ ಹಿಮ್ಮುಖವಾಗಿ ಚಲಾಯಿಸಿ ಎಸ್ಕೇಪ್‌ ಆಗಲು ಯತ್ನಿಸಿದ್ದ.

ಆತುರದಲ್ಲಿ ಚರಂಡಿಗೆ ಬಿದ್ದು ಕಾರು ಸಿಲುಕಿಕೊಂಡಿತು. ಅಲ್ಲಿಂದ ಪರಾರಿಯಾಗಲು ಯತ್ನಿಸಿದ ತೌಸೀಪ್‌ನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ತಲವಾರ್ ಹಾಗೂ MDMA ವಶಪಡಿಸಿಕೊಂಡಿದ್ದಾರೆ.

About The Author

Leave a Reply