

ಉಡುಪಿ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ.
ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ(48), ಮತ್ತು ಕಾಡಿಪಟ್ಣ ನವೀನ್ ಪೂಜಾರಿ(39) ಬಂಧಿತ ಆರೋಪಿಗಳು.
ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ಜ್‌ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.






