

ದಿನಾಂಕ :23-12-2025, ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.ಗಂಟೆಯವರೆಗೆ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಭೀರ ನಡೆಯಲಿದೆ.
ಕಳೆದ 10 ವರ್ಷಗಳಿಂದ ನಮ್ಮ ಸಂಸ್ಥೆಯ ವತಿಯಿಂದ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ ಸುಮಾರು ಸಾವಿರದಷ್ಟು ಯುನಿಟ್ ರಕ್ತ ಸಂಗ್ರಹಿಸಿ ರಕ್ತದ ಅವಶ್ಯಕತೆ ಇರುವವರಿಗೆ ನೀಡಿ ಜೀವ ಉಳಿಸುವಂತಹ ಪುಣ್ಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು.
ಅದರ ಜೊತೆಗೆ ಅನೇಕ ಸಮಾಜ ಸೇವಾ ಕಾರ್ಯಕ್ರಮಗಳನ್ನು ಸಂಘಟಿಸಿ ಇಂದು ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆ ಜಿಲ್ಲೆಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆ ಎಂಬ ಕೀರ್ತಿಗೆ ಪಾತ್ರವಾಗಿದೆ. ವಿಕಲಚೇತನರಿಗೆ ವೀಲ್ ಚೇರ್, ವಾಕರ್, ವಾಕಿಂಗ್ ಸ್ಟಿಕ್ ಮುಂತಾದ ಪರಿಕರಗಳ ವಿತರಣೆ, ಬಡ ಹೆಣ್ಣುಮಕ್ಕಳ ಮದುವೆಗೆ ಆರ್ಥಿಕ ಸಹಾಯದ ಜೊತೆಗೆ ಮದುವೆ ಉಡುಪು, ಊಟೋಪಚಾರದ ಸಾಮಾಗ್ರಿಗಳ ಕೊಡುಗೆ, ಅನಾರೋಗ್ಯ ಪೀಡಿತರಿಗೆ ನೆರವು, ಉಚಿತ ಆಂಬುಲೆನ್ಸ್ ಸೇವೆ, ವರ್ಷಂಪ್ರತಿ ಸೌಹಾರ್ದ ಇಫ್ತಾರ್ ಕೂಟ ಮುಂತಾದ ಕಾರ್ಯಕ್ರಮಗಳನ್ನು ನಿರಂತರವಾಗಿ ಸಂಘಟಿಸುತ್ತಾ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರೆ.






