January 17, 2026
WhatsApp Image 2025-12-25 at 9.19.39 AM

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2025, ಕಲಂ 306 ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ಶಿವಪ್ರಸಾದ್ (41) ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ಮಾನ್ಯ ಎ.ಎಸ್.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ, ಪುತ್ತೂರು ನಡೆಸಿದ್ದು, ನ್ಯಾಯಾಧೀಶರಾದ ದೇವರಾಜ್ ಅವರು ಆರೋಪಿಗೆ 3 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ಅನುಭವಿಸಬೇಕೆಂದು ನ್ಯಾಯಾಲಯ ಸೂಚಿಸಿದೆ.

ಈ ಪ್ರಕರಣದ ತನಿಖೆಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸುಷ್ಮಾ ಬಂಡಾರಿ ಅವರು ನಡೆಸಿದ್ದು, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತ್ವರಿತವಾಗಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಚೇತನಾ ದೇವಿ ಅವರು ಸಮರ್ಥವಾಗಿ ವಾದ ಮಂಡನೆ ನಡೆಸಿ, ಪ್ರಕರಣದ ವಿಚಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

About The Author

Leave a Reply