

ವಿಟ್ಲ: ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹ ಡಿಸೆಂಬರ್ 25 ರಂದು ವಿಟ್ಲದ ಬಾವಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕೊಲ್ನಾಡು ಗ್ರಾಮದ ಕಲ್ಲಮಜಲು ನಿವಾಸಿ ಕಲ್ಲಮಜಲು ಪೂವಪ್ಪ ಪೂಜಾರಿ (65) ಎಂದು ಗುರುತಿಸಲಾಗಿದೆ. ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಪೂವಪ್ಪ ಅವರು ಡಿಸೆಂಬರ್ 15 ರಂದು ಮನೆಯಿಂದ ಹೊರಗೆ ಹೋಗಿದ್ದು, ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು.
ಡಿ. 25ರಂದು ಕೊಲ್ನಾಡು ಗ್ರಾಮದ ಕಲ್ಲಮಜಲು ಎಂಬಲ್ಲಿ ನಿರ್ಜನ ಪ್ರದೇಶದ 60 ಅಡಿ ಆಳದ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ.






