

ಮಂಗಳೂರು : ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆಗೆ ಯತ್ನಿಸಿದ ಘಟನೆ ಕದ್ರಿ ವ್ಯಾಸನಗರದಲ್ಲಿ ನಡೆದಿದೆ.
ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ಆ*ತ್ಮಹ*ತ್ಯೆಗೆ ಯತ್ನಿಸಿದ ಎಎಸ್ಐ. ಮನೆಯಲ್ಲಿ ಯಾರೂ ಇಲ್ಲದಾಗ ಕೃ*ತ್ಯ: ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಮೂರು ವರ್ಷಗಳ ಹಿಂದೆ ಕದ್ರಿ ವ್ಯಾಸನಗರದಲ್ಲಿ ಹೊಸ ಮನೆ ಮಾಡಿ ನೆಲೆಸಿದ್ದರು.
ರಜೆಯ ಹಿನ್ನೆಲೆ ಪತ್ನಿ ಮತ್ತು ಮಕ್ಕಳು ನಿನ್ನೆ ಊರಿಗೆ ತೆರಳಿದ್ದರು. (ಡಿ.28) ಬೆಳಗ್ಗೆ ಹರಿಶ್ಚಂದ್ರ ಆ*ತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಬೊಬ್ಬೆ ಕೇಳಿ ಪಕ್ಕದ ಮನೆಯವರು ಓಡಿ ಹೀಗಿ ನೀರು ಹಾಕಿ ಬೆಂ*ಕಿ ನಂದಿಸಿದ್ದಾರೆ. ಆದರೆ, ಅಷ್ಟರಲ್ಲಿ ಮೈಯಲ್ಲಿದ್ದ ಅಂಗಿ ಸಹಿತ ಮೈ ಪೂರ್ತಿ ಸುಟ್ಟು ಹೋಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಯಿಂದ ಎದುರು ಮನೆಯ ತಗಡು ಶೀಟಿಗೂ ಬೆಂ*ಕಿ ತಗುಲಿದ್ದು, ಶೀಟ್ ಸಹಿತ ಮನೆಯ ಫೈಬರ್ ಪೈಪ್ ಸು*ಟ್ಟು ಹೋಗಿದೆ. ನೆಲಹಾಸಿನ ಮ್ಯಾಟ್ ಕೂಡ ಸು*ಟ್ಟು ಹೋಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.






