

ಕರ್ನಾಟಕ ಕೇಡರ್ 1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿ, ಡಿಐಜಿ ಮಧುಕರ್ ಶೆಟ್ಟಿ (47) ಅವರು ಹೈದ್ರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ 2018 ಡಿಸೆಂಬರ್ 28 ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಕೊನೆಯುಸಿರೆಳೆದರು. ಎಚ್1ಎನ್1 ಸೋಕಿನಿಂದ ಬಳಲುತ್ತಿದ್ದ ಮಧುಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನ್ಯುಮೋನಿಯಾದಿಂದ ಬಹುಅಂಗಾಗ ವೈಫಲ್ಯ ಉಂಟಾಗಿ ಮೃತಪಟ್ಟರು
ಕರ್ನಾಟಕ ಕೇಡರ್ 1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿ, ಡಿಐಜಿ ಮಧುಕರ್ ಶೆಟ್ಟಿ (47) ಅವರು ಹೈದ್ರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಕೊನೆಯುಸಿರೆಳೆದರು.

ಎಚ್1ಎನ್1 ಸೋಕಿನಿಂದ ಬಳಲುತ್ತಿದ್ದ ಮಧುಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನ್ಯುಮೋನಿಯಾದಿಂದ ಬಹುಅಂಗಾಗ ವೈಫಲ್ಯ ಉಂಟಾಗಿ
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಕೂಡಾ ನಡೆದಿತ್ತು. ಇದೆಲ್ಲದರ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.
ರಾಜ್ಯ ಕಂಡ ಅತ್ಯಂತ ಪ್ರಾಮಾಣಿಕ ಐಪಿಎಸ್ ಅಧಿಕಾರಿಗಳಲ್ಲಿ ಒಬ್ಬರಾದ ಮಧುಕರ್ ಶೆಟ್ಟಿ, ಬಳ್ಳಾರಿ ಗಣಿಗಾರಿಕೆ ಹಗರಣ ಹೊರತೆಗೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ನ್ಯಾ. ಸಂತೋಷ್ ಹೆಗ್ಡೆ ಅವರು ಲೋಕಾಯುಕ್ತರಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲೂ ಭ್ರಷ್ಟಾಚಾರವಿದೆ ಎಂದು ಆರೋಪಿಸಿದ್ದ ಮಧುಕರ್ ಶೆಟ್ಟಿ, ನಂತರದ ಬೆಳವಣಿಗೆಗಳಿಂದ ಬೇಸರಗೊಂಡು ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕೆಂದು ತೆರಳಿದ್ದರು. ಬಳ್ಳಾರಿ ಅಕ್ರಮ ಗಣಿಗಾರಿಕೆ ಹಗರಣವನ್ನು ಹೊರ ತೆಗೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ರಾಜ್ಯದ ಉನ್ನತ ಅಧಿಕಾರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿ ಕಚೇರಿಯು ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುತ್ತಿತ್ತು. ಈ ನಡುವೆ, ಮಧುಕರ್ ಅವರ ಆರೋಗ್ಯ ವಿಚಾರಣೆಗಾಗಿ ರಾಜ್ಯದಿಂದ ಆಂತರಿಕ ಭದ್ರತಾ ದಳದ ಎಡಿಜಿಪಿ ಪ್ರತಾಪ್ ರೆಡ್ಡಿ ಅವರು ಹೈದರಾಬಾದ್‌ಗೆ ತೆರಳಿದ್ದರು.
ದಿಲ್ಲಿಯ ಜೆಎನ್‌ಯುನಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಮಧುಕರ್ ಶೆಟ್ಟಿ, ನ್ಯೂಯಾರ್ಕ್‌ನ ಆಲ್ಬನಿ ವಿವಿಯಲ್ಲಿ ಸಾರ್ವಜನಿಕ ಆಡಳಿತ ವಿಷಯ ಕುರಿತು ಪಿ.ಎಚ್‌ಡಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಎಸ್ಪಿಯಾಗಿ, ಚಾಮರಾಜನಗರ ಮತ್ತು ಚಿಕ್ಕಮಗಳೂರಿನಲ್ಲಿ ಎಸ್ಪಿಯಾಗಿದ್ದರು. ವೀರಪ್ಪನ್ ಬಂಧನದ ಸ್ಪೆಷಲ್ ಟಾಸ್ಕ್‌ಫೋರ್ಸ್‌ನಲ್ಲಿ ಎಸ್ಪಿ ಆಗಿ,ರಾಜ್ಯಪಾಲರ ಕಚೇರಿ, ಬೆಂಗಳೂರು ನಗರ ಸಂಚಾರ ವಿಭಾಗದ ಡಿಸಿಪಿಯಾಗಿ, 2008-09ರಲ್ಲಿ ಕೋಸೋವಾದಲ್ಲಿ ಯುನೈಟೆಡ್ ನೇಷನ್ಸ್ ಮಿಷನ್‌ನಲ್ಲಿ ಯುದ್ಧಪರಾಧಗಳ ತನಿಖಾದಳದಲ್ಲೂ ಕಾರ್ಯ ನಿರ್ವಹಿಸಿದ್ದಾರೆ. 2017ರ ಮಾರ್ಚ್‌ನಲ್ಲಿ ಹೈದರಾಬಾದ್‌ನ ಐಪಿಎಗೆ ಸೇರ್ಪಡೆಗೊಂಡಿದ್ದಾರು.
ಒಂದು ಮತದ ಫಲಿತಾಂಶ ಘೋಷಣೆಗೆ ಧೈರ್ಯ ತುಂಬಿದ್ದರು
ಹಿರಿಯ ಪತ್ರಕರ್ತ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹಿರಿಯ ಪುತ್ರರಾದ ಮಧುಕರ್ ಶೆಟ್ಟಿ ಉಡುಪಿಯಲ್ಲಿ ಜನಿಸಿದ್ದರು. ಪತ್ನಿ, ಪುತ್ರಿ, ಸಹೋದರನನ್ನು ಅಗಲಿದ್ದಾರೆ.
ಸರಳ ಜೀವನದ ಮೂಲಕ ಹೆಸರುವಾಸಿಯಾಗಿದ್ದರು. ಚಾಮರಾಜನಗರ ಜಿಲ್ಲೆ ಎಸ್ಪಿಯಾಗಿದ್ದಾಗ ಮಾರುವೇಷದಲ್ಲಿ ತಪಾಸಣೆ ನಡೆಸುತ್ತಿದ್ದರು. ತಮಿಳುನಾಡು, ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಕರಿಕಲ್ಲು, ಮರಳು ದಂಧೆಗೆ ಕಡಿವಾಣ ಹಾಕಿದ್ದರು. ಒಂದು ಮತದಿಂದ ಸಂತೇಮಾರನಹಳ್ಳಿ ವಿಧಾನಸಭೆ ಚುನಾವಣೆಯಲ್ಲಿ ಫಲಿತಾಂಶ ಬಂದಿರುವುದನ್ನು ಘೋಷಿಸಲು ಹೆದರುತ್ತಿದ್ದಾಗ ಚುನಾವಣಾಧಿಕಾರಿಗೇ ಧೈರ್ಯ ನೀಡಿ ಫಲಿತಾಂಶ ಘೋಷಣೆ ಮಾಡಿಸಿದ್ದರು.
ಮಧುಕರ್ ಶೆಟ್ಟಿ ಯವರ ನಿಧನಕ್ಕೆ ಸಿಎಂ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ , ಶಾಸಕ ಸುರೇಶ್ ಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಕೋರಿದ್ದರು.






