

ಮಲ್ಪೆ: ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆಯ ಅಧ್ಯಕ್ಷ ಸಿರಾಜ್ ಮಲ್ಪೆ ಇಂದು ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರು ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ಮಲ್ಪೆ ಶಾಖೆಯ ಅಧ್ಯಕ್ಷರಾಗಿದ್ದರು. ಅವರು ಸಕ್ರಿಯ ಸಾಮಾಜ ಸೇವಕರಾಗಿದ್ದು, ಸಮುದಾಯ ಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಲೇಖಕರಾಗಿದ್ದರು.
ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.






