

ಸುಳ್ಯ: ಅರಂಬೂರಿನಲ್ಲಿ ಬೈಕ್ ಅಪಘಾತವಾಗಿ ಸವಾರ ಗಂಭೀರ ಗಾಯಗೊಂಡಿರುವ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ.ಡಿ.5ರಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ.
ಸಲ್ಮಾನ್ ಎಂಬವರು ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ತಡೆಬೇಲಿಗೆ ಗುದ್ದಿ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಬೈಕ್ ಪಲ್ಟಿಯಾಗಿ ಸಲ್ಮಾನ್ ಅವರ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.






