

ವಿಟ್ಲ: ವಿಟ್ಲ ಕಸಬ ಗ್ರಾಮದ ನಿವಾಸಿ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬ ಕ್ರಿಮಿನಲ್‌ನನ್ನು ಪೊಲೀಸರು ಚಿಕ್ಕಮಗಳೂರಿಗೆ ಗಡಿಪಾರು ಮಾಡಿದ್ದಾರೆ. ಈತನ ವಿರುದ್ಧ ಹಲ್ಲೆ, ನಿಷೇಧಿತ ಮಾದಕ ವಸ್ತುಗಳ ಸೇವನೆ ಮತ್ತು NDPS ಕಾಯ್ದೆಯಡಿ ಉಲ್ಲಂಘನೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಿವೆ. ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಗಡಿಪಾರು ಮಾಡಲಾಗಿದೆ.
ವಿಟ್ಲ ಕಸಬ ಗ್ರಾಮ ಬಂಟ್ವಾಳ ತಾಲೂಕಿನ ಅಬ್ದುಲ್ ಖಾದರ್ ಗಡಿಪಾರು ಆದ ಆರೋಪಿ. ಆರೋಪಿ ವಿರುದ್ಧ ಹಲ್ಲೆ ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಎನ್‌ಡಿಪಿಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿವೆ.
ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಅದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ.






