January 16, 2026
WhatsApp Image 2026-01-13 at 10.49.44 AM

ಬಾಂಗ್ಲಾ ಪ್ರಜೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಹಲ್ಲೆಗೈದು ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ತಾಲೂಕಿನ ಕೂಳೂರು ಗ್ರಾಮದ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು.  ಜ. 11ರಂದು ಸಂಜೆ ಸುಮಾರು 6:5ರ ವೇಳೆಗೆ ನಾಲ್ವರು ಆರೋಪಿಗಳು ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಎಂಬಾತನನ್ನು ತಡೆದು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೇ ಹಲ್ಲೆಗೈದು ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.   ಈ ಬಗ್ಗೆ ಜ. 12ರಂದು ಕಾವೂರು ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಸಂಖ್ಯೆ 03/2026 ಕಲಂ 126(2), 352, 351(3), 353, 109, 118(1) ಹಾಗೂ 3(5) ಭಾರತೀಯ ನ್ಯಾಯ ಸಂಹಿತೆ 2023 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ. 

About The Author

Leave a Reply