February 14, 2026
WhatsApp Image 2026-01-15 at 11.19.00 AM

ಬೆಂಗಳೂರು: ಧರ್ಮಸ್ಥಳದಲ್ಲಿ1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣ ಗಳ ಸಂಬಂಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತು ತನ್ನ ನಿಲುವು ತಿಳಿಸುವಂತೆ ಹೈಕೋರ್ಟ್‌, ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಧರ್ಮಸ್ಥಳದಲ್ಲಿಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು.

ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿಪ್ರಸ್ತಾಪಿಸಲಾಗಿರುವ ವಿಷಯದ ಬಗ್ಗೆ ಸರಕಾರದಿಂದ ಮಾಹಿತಿ ಪಡೆದು ನಿಲುವು ತಿಳಿಸುವಂತೆ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನು ಫೆ.3ಕ್ಕೆ ಮುಂದೂಡಿತು.

About The Author

Leave a Reply