February 14, 2026
WhatsApp Image 2026-01-15 at 2.36.18 PM

ಬೆಳ್ತಂಗಡಿ: ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15) ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ ಉಂಟಾಗಿವೆ ಮತ್ತು ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ.ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ.ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.

About The Author

Leave a Reply