January 28, 2026
WhatsApp Image 2026-01-17 at 10.51.56 AM

ಬೆಂಗಳೂರು : ವಲಸೆ ಕಾರ್ಮಿಕರು ಇರುವ ಮನೆಗೆ ತೆರಳಿ ಅಕ್ರಮವಾಗಿ ನುಗ್ಗಿ ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟು ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸ್‌ ಠಾಣಾ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎನ್ನಲಾಗಿದೆ. ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಆತನ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

About The Author

Leave a Reply