

ಬೆಂಗಳೂರು: ಮಹಿಳಾ ಒಳಉಡುಪುಗಳನ್ನು ಕದಿಯುತ್ತಿದ್ದ ಕೇರಳ ಮೂಲದ ಆರೋಪಿ ಅಮಲ್ (23) ಎಂಬಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ.
ಆರೋಪಿ ಮಹಿಳೆಯರ ಒಳಉಡುಪುಗಳನ್ನು ಕದ್ದು, ನಂತರ ಅವುಗಳನ್ನ ಧರಿಸಿಕೊಂಡು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಹೆಬ್ಬಗೋಡಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ ಮಾಡಿದಾಗ, ಮಹಿಳಾ ಒಳಉಡುಪು ಧರಿಸಿಕೊಂಡಿರುವ ಹಲವು ಫೋಟೋಗಳು ಪತ್ತೆಯಾಗಿವೆ. ಇದನ್ನೂ ಓದಿ: ಹನೂರು: ಬೆಂಕಿ ಅನಾಹುತ; ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಮೇವು ಸುಟ್ಟು ಭಸ್ಮ ಇನ್ನು ಆರೋಪಿಯ ಮನೆಯಲ್ಲಿ ಶೋಧ ನಡೆಸಿದ ವೇಳೆ ಮಹಿಳಾ ಒಳಉಡುಪುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದುದೂ ಪತ್ತೆಯಾಗಿದೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.







