February 14, 2026
WhatsApp Image 2026-01-22 at 3.19.21 PM

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರ ಕೊಟ್ಟ ಭಾಷಣ ಮಾಡದೇ ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಅವರು ರೆಡಿ ಮಾಡಿಕೊಂಡ ಭಾಷಣವನ್ನು ಓದುವಂತಿಲ್ಲ. ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಲೇಬೇಕು. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದರು.

ಮನ್ ರೇಗಾ ಬದಲಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಂದಿದ್ದಾರೆ. ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದಾರೆ. ಸಂವಿಧಾನದ ಪ್ರಕಾರ ರಾಜ್ಯಪಾಲರು ಭಾಷಣ ಮಾಡವುದು ಕರ್ತವ್ಯ ಎಂದು ಹೇಳಿದ್ದಾರೆ.

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದ್ದು, ಆರ್ಥಿಕ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ನನ್ನ ಸರ್ಕಾರ ಬದ್ಧವಾಗಿದೆ. ಅವರಿಗೆ ನನ್ನ ಶುಭಾಶಯ, ಜೈ ಹಿಂದ್, ಜೈಕರ್ನಾಟಕ ಎಂದು ರಾಜ್ಯಪಾಲರು ಭಾಷಣ ಮುಗಿಸಿದ್ದಾರೆ. ಈ ಮೂಲಕ ಸರ್ಕಾರ ಕೊಟ್ಟ ಭಾಷಣ ಓದದೇ ಕೆಲ ಅಂಶಗಳನ್ನು ಮಾತ್ರ ಓದಿ ಭಾಷಣ ಮುಗಿಸಿದ್ದಾರೆ.

About The Author

Leave a Reply