January 28, 2026
WhatsApp Image 2026-01-23 at 8.59.17 AM

 ಧಾರವಾಡದಲ್ಲಿ 19 ವರ್ಷದ ಮುಸ್ಲಿಂ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿಸುತ್ತಿದ್ದ ಪ್ರಿಯಕರ ಸಾಬೀರ್ ಮುಲ್ಲಾನೇ ಝಕಿಯಾಳನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಹೌದು, 19 ವರ್ಷದ ಯುವತಿ ಝಕಿಯಾ ಮುಲ್ಲಾ ಶವ ಧಾರವಾಡ ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿ ಬಳಿ ಪತ್ತೆಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಕರ ಸಾಬೀರ್ ಮುಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.

ಮುಂದಿನ ತಿಂಗಳು ಝಕಿಯಾ ಮುಲ್ಲಾ ಹಾಗೂ ಸಾಬೀರ್ ಮುಲ್ಲಾರ ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿದ್ದರು. ಆದರೆ ಯುವತಿಯನ್ನು ಮದುವೆಯಾಗಬೇಕಿದ್ದ ಸಾಬೀರ್ ಮುಲ್ಲಾ ವೇಲ್‌ನಿಂದ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಜನವರಿ 20ರ ಸಂಜೆ ಇಬ್ಬರೂ ಹೊರಗಡೆ ಸುತ್ತಾಡಲು ಹೋಗಿದ್ದರು. ಈ ವೇಳೆ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಸಾಬೀರ್, ವೇಲ್‌ನಿಂದಲೇ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸದ್ಯ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು, ಸಾಬೀರ್ ಮುಲ್ಲಾನನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

About The Author

Leave a Reply