

ಮಂಗಳೂರು : ಅಭಿಮಾನಿಗಳನ್ನು ಬೈಯುತ್ತಲೇ ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಆಶಾ ಪಂಡಿತ್ ತಮ್ಮ ಬೈಗುಳದ ರೀಲ್‌ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ್ದರು. ಅವರು ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನೂ ನಡೆಸುತ್ತಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರಿಗೆ ನಿನ್ನೆ ರಾತ್ರಿ ವಾಂತಿ ಸಮಸ್ಯೆ ಉಂಟಾಗಿತ್ತು.
ಶುಕ್ರವಾರ ಬೆಳಗಿನ ಜಾವ ಅವರಿಗೆ ಹೃದಯಾಘಾತವಾಗಿ ಮನೆಯ ಅಂಗಳದಲ್ಲಿ ಕುಸಿದು ಬಿದ್ದರು ಎಂದು ವರದಿಯಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಆಗಲೇ ಮೃತಪಟ್ಟಿದ್ದರು.






