February 8, 2026
WhatsApp Image 2026-02-08 at 9.18.57 AM

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪತ್ತೆಯಾದ ರೂ.53 ಲಕ್ಷ ಮೌಲ್ಯದ 1 ಕಿಂಟ್ವಾಲ್ 6 ಕೆ.ಜಿ. 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಒರಿಸ್ಸಾ ರಾಜ್ಯದ ವ್ಯಕ್ತಿಯೊಬ್ಬರನ್ನು ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳಿಗೆ ಹಣ ಹಾಗೂ ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ. (27), ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಹಾಗೂ ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37)ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಂಜಾ ಪೂರೈಕೆ ಮಾಡುತ್ತಿದ್ದ ದೀಪಕ್ ಪಾತ್ರ ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ಅವರ ನೇತೃತ್ವದ ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ವಶಕ್ಕೆ ಪಡೆದುಕೊಂಡಿದೆ. ಈ ವೇಳೆ ಆರೋಪಿಯಿಂದ ರೂ.80,000 ಮೌಲ್ಯದ 1 ಕೆ.ಜಿ. 788 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ. ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ್ ಹಾಗೂ ದಿವ್ಯಾಪ್ರಕಾಶ್ ಅವರನ್ನು ಒಳಗೊಂಡ ತಂಡ ಭಾಗಿಯಾಗಿತ್ತು. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಮುಂದುವರಿದಿದೆ.

About The Author

Leave a Reply