

ಬೆಳ್ತಂಗಡಿ: ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಟರು ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಯುವತಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಸುದೇಮುಗೇರು ಎಂಬಲ್ಲಿ ನಡೆದಿದೆ.
ಈ ವೇಳೆ ಯುವತಿ ತೋರಿದ ಪ್ರತಿರೋಧ ಹಾಗೂ ಸಮಯ ಪ್ರಜ್ಞೆಯಿಂದಾಗಿ ಕಿಡ್ನಾಪರ್ಸ್ ಪ್ರಯತ್ನ ವಿಫಲವಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸುವ ಪ್ರಯತ್ನ ಇದಾಗಿದ್ದು, ಕಾರಿನ ನಂಬರ್ ಪ್ಲೇಟ್ ಕಾಣದಂತೆ ದುಷ್ಟರು ಅದಕ್ಕೆ ಬಟ್ಟೆ ಕಟ್ಟಿದ್ದರು ಎಂದು ತಿಳಿದು ಬಂದಿದೆ.
ಕಾರಿನಿಂದ ಇಳಿದ ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಕಾರಿನೊಳಕ್ಕೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಯುವತಿ ತೀವ್ರ ಪ್ರತಿರೋಧವೊಡ್ಡಿ ಜೋರಾಗಿ ಬೊಬ್ಬೆ ಹೊಡೆದಿದ್ದಾಳೆ. ಅದೇ ಸಮಯದಲ್ಲಿ ಹಿಂದಿನಿಂದ ಒಂದು ಸ್ಕೂಟರ್ ಬರುತ್ತಿರುವುದನ್ನು ಕಿಡ್ನಾಪರ್ಸ್ ಗಮನಿಸಿದ್ದು, ಯುವತಿಯ ಕೈಗೆ ಚೂರಿಯಿಂದ ಇರಿದು, ಆಕೆಯ ಬ್ಯಾಗ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.





