

ವಿಟ್ಲ,ಫೆ: ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸಂಭವಿದೆ. ಘಟನೆ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ.
ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದರೂ ಸಂಭವನೀಯ ದುರಂತ ತಪ್ಪಿಹೋಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ






