

ಕಡಬ: ಉದ್ಯೋಗದ ನಿಮಿತ್ತ ಐರ್ಲೆಂಡ್‌ಗೆ ತೆರಳಿದ್ದ ಕಡಬ ಮೂಲದ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದ ಘಟನೆ ವರದಿಯಾಗಿದ್ದು, ಮೃತರನ್ನು ಕುಟ್ರುಪಾಡಿ ವಿಮಲಗಿರಿ ನಿವಾಸಿಯಾದ ಸಾಂಜೋ ಸುನಿಲ್ ಎಂದು ಗುರುತಿಸಲಾಗಿದೆ.
ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ಮನೆಯಲ್ಲಿ ಸಾಂಜೋ ಸುನಿಲ್ ಶವವಾಗಿ ಪತ್ತೆಯಾಗಿದ್ದಾರೆ. ನಿಗೂಢ ಸಾವು ಆತ್ಮಹತ್ಯೆ ಇರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಸಾವಿನ ನಿಖರವಾದ ಕಾರಣ ತಿಳಿದು ಬಂದಿಲ್ಲ. ಐರಿಶ್ ಪೊಲೀಸರಿಂದ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.
ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ತ್ರೀವ ಅಘಾತಗೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.






