February 26, 2026
WhatsApp Image 2026-02-26 at 8.59.49 AM

ಮಂಗಳೂರು: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ರ ಸಂಖ್ಯೆ 193/2019 ಪ್ರಕರಣದ ಆರೋಪಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಐಪಿಸಿ ಕಲಂ 427, 504, 394, 341 ಹಾಗೂ 2(A) Prevention of Destruction and Loss of Property Act ಅಡಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನು 24/02/2026 ರಂದು ವಿದೇಶದಿಂದ ಮರಳಿ ಬರುವಾಗ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ (HC 668) ಹಾಗೂ ಪೊಲೀಸ್ ಕಾನ್ಸ್‌ಟೇಬಲ್ (PC 2465) ರವರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 07/03/2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.ಈ ಕಾರ್ಯಾಚರಣೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳ ಚುರುಕು ಕಾರ್ಯಾಚರಣೆಯಿಂದ ಯಶಸ್ವಿಯಾಗಿದೆ.

About The Author

Leave a Reply