

ಮಾನ್ಯ ವಿಧಾನಸಭಾ ಸಭಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ವಿನಯ್ ಕುಮಾರ್ ಸೊರಕೆ ರವರ ಶಿಫಾರಸ್ಸಿನ ಮೇರೆಗೆ, ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ನಾಝೀಯಾ ಖಾನಂ ಆದ ತಮ್ಮನ್ನು ತಕ್ಷಣದಿಂದ
ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ.

ತಮಗೆ ವಹಿಸಲಾಗಿರುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ದೊರೆಯಲೆಂದು ಹಾರೈಸುತ್ತೇನೆ.







