

ಮಂಗಳೂರು: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಬಳಿಕ ಮುಂಜಾಗ್ರತಾ ಕ್ರಮವಾಗಿ ಗಲ್ಫ್ ರಾಷ್ಟ್ರಗಳು ತನ್ನ ವಾಯುಪ್ರದೇಶವನ್ನು ಮುಚ್ಚಿದೆ.
ಈ ಹಿನ್ನಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ಗೆ ತೆರಳುವ, ಆಗಮಿಸುವ ವಿಮಾನಯಾನ ಸಂಚಾರಗಳು ರದ್ದಾಗಿವೆ.ಇರಾನ್ ಮೇಲೆ ದಾಳಿ ಪ್ರಾರಂಭವಾಗುವ ಮುಂಚೆಯೇ ಮಂಗಳೂರಿನಿಂದ ದೋಹಾಕ್ಕೆ ತೆರಳಲು ಟೇಕಾಫ್ ಆಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 7 ಗಂಟೆಗೆ ಲ್ಯಾಂಡ್ ಆಗಲಿದೆ. ಮಧ್ಯಾಹ್ನ 1.20ಕ್ಕೆ ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ IX 831 IXE-DXB ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ರದ್ದುಗೊಳಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ರದ್ದುಗೊಳಿಸಿರುವುದನ್ನು ತಿಳಿಸಿತು.

ವಿಮಾನದಲ್ಲಿ ತೆರಳಲು 174 ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿ ಸಿದ್ಧರಾಗಿದ್ದರು ಎಂದು ಮಂಗಳೂರು ವಿಮಾನ ನಿಲ್ದಾಣದ ಪ್ರಕಟನೆ ತಿಳಿಸಿದೆ.
ಯಾವ್ಯಾವ ವಿಮಾನಗಳು ರದ್ದು?
ಮಧ್ಯಾಹ್ನ 1.20ಕ್ಕೆ ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ IX 831 IXE-DXB ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ರದ್ದು ರಾತ್ರಿ 10.05ಕ್ಕೆ ಮಂಗಳೂರಿನಿಂದ ಕುವೈತ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ IX851 IXE-KWI ರದ್ದು ಮಾಡಲಾಗಿದೆ.
ರಾತ್ರಿ 11.20ಕ್ಕೆ ಮಂಗಳೂರಿನಿಂದ ಅಬುದಾಬಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ IX815 IXE-AUH ರದ್ದಾಗಿದೆ.ಮಧ್ಯಾಹ್ನ 2.15ಕ್ಕೆ ದೋಹಾದಿಂದ ಹೊರಟು ಮಂಗಳೂರಿಗೆ ರಾತ್ರಿ 8.45ಕ್ಕೆ ಬರಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ IX822 DOH-IXE ರದ್ದಾಗಿದೆ.ಸಂಜೆ 5 ಗಂಟೆಗೆ ದುಬೈನಿಂದ ಹೊರಟು ಮಂಗಳೂರಿಗೆ ರಾತ್ರಿ 10.10ಕ್ಕೆ ತಲುಪಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ IX832 DXB-IXE ರದ್ದಾಗಿದೆ.






