March 5, 2026
WhatsApp Image 2026-03-05 at 8.59.18 AM

ಅಮೆರಿಕ ಮತ್ತು ಇಸ್ರೇಲ್ ಕ್ಷಿಪಣಿ ದಾಳಿಗೆ ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಘಟನೆ ಸಂಭವಿಸಿದೆ.

ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಚಂದ್ರಶೇಖರ ಎಂಬಾತನಿಗೆ ಐದಾರು ಮುಸ್ಲಿಂ ಯುವಕರಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿಯಲಾಗಿದೆ.

ಈ ಘಟನೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply