

ಮಂಗಳೂರು: ಇಂದು ರಾಜ್ಯ ವಿಧಾನಸಭೆಯಲ್ಲಿ ದಾಖಲೆಯ 17ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದು, ಇದರಲ್ಲಿ ಪ್ರಮುಖವಾಗಿ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಮರುಪ್ರಾರಂಭಿಸಲು ಸರ್ಕಾರ ಉದ್ದೇಶಿಸಿರುವುದನ್ನು ಮಂಗಳೂರು ವಿಶ್ವವಿಧ್ಯಾಲಯ ಸಿಂಡಿಕೆಟ್ ಸದಸ್ಯರಾದ ಸಾವಾದ್ ಸುಳ್ಯ ಸ್ವಾಗತಿಸಿದ್ದಾರೆ.
ರಾಜ್ಯ ಸರ್ಕಾರದ ಈ ಹೊಸ ಯೋಜನೆಗಳು ಶಿಕ್ಷಣ ಕ್ಷೇತ್ರದಲ್ಲಿ ಸಮಾನತೆ, ಸುರಕ್ಷತೆ ಮತ್ತು ಅವಕಾಶಗಳನ್ನು ಹೆಚ್ಚಿಸುವತ್ತ ಮಹತ್ವದ ಹೆಜ್ಜೆಯಾಗಿದೆ

ಅದೇ ರೀತಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಆರಂಭಿಸಲಿದ್ದು, ಉನ್ನತ ವ್ಯಾಸಂಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತ್ಯಂತ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಒದಗಿಸುವ ಈ ಯೋಜನೆಯು ವಿದ್ಯಾರ್ಥಿಗಳ ದಿನನಿತ್ಯದ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲಿದೆ. ಶಿಕ್ಷಣಕ್ಕಾಗಿ ಊರು ಬಿಟ್ಟು ಬರುವ ಸಾವಿರಾರು ಯುವಜನತೆಗೆ ಇದು ಸರ್ಕಾರದ ದೊಡ್ಡ ಉಡುಗೊರೆಯಾಗಿದೆ ಸವಾದ್ ಸುಳ್ಯ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ






