

: ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಜಲಜಾಕ್ಷಿ (53) ಇದೀಗ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ಈ ಒಂದು ಕಾಡಾನೆ ದಾಳಿ ಘಟನೆಯ ಸಂಭವಿಸಿದೆ.
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಜಲಜಾಕ್ಷಿ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಬಾಳೆಗೊಂಡಿ ಹಾಡಿ ನಿವಾಸಿ ನಡೆದುಕೊಂಡು ಹೋಗುವಾಗ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಜಲಜಾಕ್ಷಿ ಸ್ಥಳದಲ್ಲಿ ಸಾಬಣ್ಣ ಬಿದ್ದು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ACF ಗೋಪಾಲ್ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.







