March 9, 2026
WhatsApp Image 2026-03-09 at 5.42.27 PM

ಮಂಡ್ಯ ಜಿಲ್ಲೆಯ ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗು ಇತ್ತು. ಕೌಟುಂಬಿಕ ಜಗಳಕ್ಕೆ ರೋಸಿಹೋದ ದಂಪತಿ ಇಂದು ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ ಮಂಡ್ಯದ ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ಬಾಡಿಗೆ ಇದ್ದ ದಂಪತಿ ಮೊದಲು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿದ್ದಾರೆ. ತದನಂತರ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ಹೇಳಲಾಗ್ತಿದೆ. ಅದೃಷ್ಟವಶಾತ್ 2 ವರ್ಷದ ಮಗು ಅಸ್ವಸ್ಥಗೊಂಡು ಬದುಕುಳಿದಿದೆ.

ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದಂಪತಿಯ ಕೆಟ್ಟ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಕೌಂಟುಂಬಿಕ ಕಲಹದಿಂದ ಬೇಸತ್ತು ಈ ಪ್ರಪಂಚವನ್ನೇ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗಿದೆ. ಪೊಲೀಸ್ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.

About The Author

Leave a Reply