March 11, 2026
WhatsApp Image 2026-03-11 at 11.33.25 AM

ಮಂಗಳೂರು: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿ ಸಿದ ಜಾಮ್‌ನಗರ -ತಿರುನಲ್ವೇಲಿ ಜಂಕ್ಷನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗ ಜ್ ರಾಕ್‌ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ನೂರಾರು ಬಳಸಿದ ಮೊಬೈಲ್‌ಗಳು ಪತ್ತೆಯಾಗಿವೆ.

ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್‌ಪಿಎಫ್ ಹೆಡ್ ಕಾನ್ಸ್‌ಟೇಬಲ್ ಸುಜೀಶ್ ಮತ್ತು ಕಾನ್ಸ್‌ಟೇಬಲ್ ರಾಮಕೃಷ್ಣ ಅವರು ತಪಾಸಣೆ ಕೈಗೊಂಡು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಸಮಯದಲ್ಲಿ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟವನ್ನು ಪತ್ತೆಹಚ್ಚುವುದಕ್ಕಾಗಿ ತಪಾಸಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ರೈಲು ನಿಲ್ದಾಣದ ಸಿಸಿಟಿವಿ ಇನ್ನಿತರ ದೃಶ್ಯಗಳನ್ನು ಪರಿಶೀಲಿಸಿದಾಗ, ಬ್ಯಾಗ್‌ಗಳು ಪತ್ತೆಯಾದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಹೀಗಾಗಿ ಅಪರಾಧ ವಿಭಾಗದ ಗುಪ್ತಚರ ದಳ (CIB) ಮತ್ತು ರೈಲ್ವೆ ಪೊಲೀಸರು (GRP) ಇಬ್ಬರು ಶಂಕಿತರಿಗಾಗಿ ಶೋಧ ನಡೆಸುತ್ತಿದ್ದಾರೆ. ಮೊಬೈಲ್ ಗಳನ್ನು ಎಲ್ಲಿಗೆ, ಯಾವ ಉದ್ದೇಶಕ್ಕಾಗಿ ಒಯ್ಯಲಾಗುತ್ತಿತ್ತು. ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆ ಆಗಬೇಕಷ್ಟೆ.

About The Author

Leave a Reply