

ವಿಟ್ಲ: ಕುದ್ದುಪದ್ದವು ಪೆರುವಾಯಿ ರಸ್ತೆಯ ಮುಳಿಯ ದಂಬೆ ಅಂಗನವಾಡಿ ಕೇಂದ್ರದ ಸಮೀಪ ಕೆಎಸ್‍ಆರ್‍ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದು, ಎರಡು ಕಡೆಯವರ ಮಾತಿನ ಚಕಮಕಿ ನಡೆದು, ದೂರು ಪ್ರತಿದೂರು ದಾಖಲಾಗಿದೆ.
ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮತ್ತು ಪೆರುವಾಯಿ ಕಡೆ ಹೋಗುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇಳಿಜಾರು ಪ್ರದೇಶ ಹಾಗೂ ತಿರುವಿನಲ್ಲಿ ಎರಡು ವಾಹನಗಳು ಒಟ್ಟಿಗೆ ಮುನ್ನುಗಿದ ಕಾರಣ ಅಪಘಾತವಾಗಿದೆ.

ಅಪಘಾತದ ಬಳಿಕ ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದ್ದು, ಆ ಬಳಿಕ ಟಿಪ್ಪರ್ ಚಾಲಕ, ಬಸ್ ಚಾಲಕ ಮತ್ತು ನಿರ್ವಾಹಕರ ನಡುವೆ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ. ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿ ದೂರು ಪ್ರತಿದೂರು ನೀಡಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






