

ಮಂಗಳೂರು: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ದೈವ ನರ್ತಕ ರವೀಶ್ ಪಡುಮಲೆಯವರಿಗೆ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿಂದು ಜರುಗಿತು.

ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕುಲಸಚಿವ ಪ್ರೊ.ದೇವೇಂದ್ರಪ್ಪ (ಪರೀಕ್ಷಾಂಗ )ಗಣೇಶ್ ಸಂಜೀವ (ಪ್ರಭಾರ), ಹಣಕಾಸು ಅಧಿಕಾರಿ ಡಾ.ವೈ.ಸಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.






