April 5, 2026
WhatsApp Image 2026-04-05 at 9.23.31 AM

ಉಡುಪಿ: ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ ಆಸಾಮಿ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ, ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಏಪ್ರಿಲ್ 4, 2026 ರಂದು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಬಂಧಿತ ಗಣೇಶ್ ಪೂಜಾರಿ ಅವರು ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಸದ್ಗುಣ ನಿವಾಸದವರು.

ಆರೋಪಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ 4, ದರೋಡೆ 1, ಹಲ್ಲೆ 3, ಅಕ್ರಮ ಕೂಟ 1, ಜೂಜಾಟ 1 ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ 1ರಲ್ಲಿ ಶಿಕ್ಷೆ ವಿಧಿಸಲಾಗಿದ್ದು, 7 ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಒಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ.

ಬಂಧಿತನನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ.

About The Author

Leave a Reply