April 15, 2026
WhatsApp Image 2026-04-15 at 9.24.49 AM

ಚಿಕ್ಕಮಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸದದ್ದು, ಮೆರವಣಿಗೆಯ ಮೇಲೆ ಕಾರು ಹರಿದ ಪರಿಣಾಮ 7 ವರ್ಷದ ಸಾನ್ವಿ ಎಂಬ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಘಟನೆಯ ವಿವರ:
ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿದ್ದ ಜನರ ಮೇಲೆ ನುಗ್ಗಿದೆ. ಈ ದುರ್ಘಟನೆಯಲ್ಲಿ ಬಾಲಕಿ ಸಾನ್ವಿ ಸಾವನ್ನಪ್ಪಿದ್ದು, ಇತರ 9 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳು: ಅಪಘಾತದಲ್ಲಿ ಗಾಯಗೊಂಡ 9 ಜನರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನು ಸಹ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply