April 19, 2026
WhatsApp Image 2026-04-17 at 9.09.51 AM

ಕಡಬ: ಲೋನ್‌ ಆಫೀಸರ್‌ ಆಗಿ ಕೆಲಸ ಮಾಡುತ್ತಿದ್ದ ಕಡಬದ ಯುವಕನೊಬ್ಬ ಮಾನಸಿಕ ಖಿನ್ನತೆಗೆ ಒಳಗಾಗಿ ಇದೀಗ ಸಾವಿಗೆ ಶರಣಾಗಿದ್ದಾರೆ.

ಕಿಶನ್ ಎ ಎಚ್‌ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ ಹೂವಪ್ಪ ಗೌಡ ಎಂಬವರ ಪುತ್ರ ಕಿಶನ್ ಎ ಹೆಚ್ ಅವರು ಕಳೆದ ಎರಡು ವರ್ಷಗಳಿಂದ ಗುತ್ತಿಗಾರಿನ ‘ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ಲಿಮಿಟೆಡ್’ನಲ್ಲಿ ಲೋನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಎರಡು ಮೂರು ತಿಂಗಳುಗಳಿಂದ ಕಿಶನ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮಾನಸಿಕ ಖಿನ್ನತೆಗೆ ಕಾರಣವೇನು ಎಂದು ಮನೆಯವರು ವಿಚಾರಿಸಿದರೂ ಯಾವುದೇ ಸ್ಪಷ್ಟ ಕಾರಣ ತಿಳಿದುಬಂದಿರಲಿಲ್ಲ. ಇದೀಗ ಕಿಶನ್‌ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

About The Author

Leave a Reply