

ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನಾಸಿಕ್ ಶಾಖೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಡೆದಿದೆ ಎನ್ನಲಾದ ವ್ಯವಸ್ಥಿತ ಮತಾಂತರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಕ್ಕ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಬಂಧನದಿಂದ ತಪ್ಪಿಸಿಕೊಳ್ಳಲು ಇದೀಗ ತಾನು ಗರ್ಭಿಣಿಯಾಗಿದ್ದು, ಈ ಹಿನ್ನಲೆ ನಿರೀಕ್ಷಣಾ ಜಾಮೀನು ನೀಡುವಂತೆ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಾಸಿಕ್ ಟಿಸಿಎಸ್ ಕಚೇರಿಯಲ್ಲಿ 2022 ರಿಂದ 2026ರ ಅವಧಿಯಲ್ಲಿ ನಡೆದಿದೆ ಎನ್ನಲಾದ ವ್ಯವಸ್ಥಿತ ಮತಾಂತರ ಸಂಚು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಸದ್ಯ ತಲೆಮರೆಸಿಕೊಂಡಿದ್ದು, ಮುಂಬೈನಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಪ್ರಮುಖ ಸೂತ್ರಧಾರಿ ಎನ್ನಲಾದ ನಿದಾ ಖಾನ್ ಸದ್ಯ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದು, ಪೊಲೀಸರ ಕಣ್ತಪ್ಪಿಸಿ ನಾಸಿಕ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ವೈದ್ಯಕೀಯ ಕಾರಣಗಳಿಗಾಗಿ ಬಂಧನದಿಂದ ವಿನಾಯಿತಿ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ. ಆದರೆ, ಈ ವೈದ್ಯಕೀಯ ದಾಖಲೆಗಳ ಬಗ್ಗೆ ತೀವ್ರ ಅನುಮಾನ ವ್ಯಕ್ತಪಡಿಸಿರುವ ವಿಶೇಷ ತನಿಖಾ ತಂಡವು, ಮುಂಬೈನ ಖಾಸಗಿ ಆಸ್ಪತ್ರೆಯೊಂದರ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಆರೋಪಿಯ ಹೇಳಿಕೆಯನ್ನು ಅಧಿಕೃತ ವೈದ್ಯಕೀಯ ತಪಾಸಣೆಯ ಮೂಲಕ ಪರಿಶೀಲಿಸಲು ಎಸ್‌ಐಟಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.








