April 19, 2026
WhatsApp Image 2026-04-19 at 3.47.34 PM

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಬೆಂಗಳೂರಲ್ಲಿ ಉದ್ಯಮಿ ಕೃಪಲಾನಿ, ಪ್ರೀತಿ ಮತ್ತು ಮದುವೆಯ ನೆಪದಲ್ಲಿ ಸುಮಾರು 50 ಮಹಿಳೆಯರಿಗೆ ವಂಚಿಸಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು, ಖಾಸಗಿ ಕ್ಷಣಗಳನ್ನು ಸೆರೆಹಿಡಿದು ಬೆದರಿಸುತ್ತಿದ್ದ ಈತನ ಕೃತ್ಯ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

ಉದ್ಯಮಿ ಕೃಪಲಾನಿ ಪ್ರೀತಿ ಮತ್ತು ಮದವೆ ಹೆಸರಿನಲ್ಲಿ ಮಹಿಳೆಯರನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸುತ್ತಿದ್ದನು ಎಂಬುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ಎಂದು ಪರಿಚಯಿಸಿಕೊಳ್ಳುತ್ತಿದ್ದ ಕೃಪಲಾನಿ ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದನು. ಪರಿಚಯ ಮಾಡಿಕೊಂಡ ಅಧಿಕಾರಿಗಳಿಗೆ ಲಂಚ್, ಡಿನ್ನರ್ ಪಾರ್ಟಿಗೆ ಆಹ್ವಾನಿಸಿ ಸಲುಗೆ ಬೆಳೆಸಿಕೊಳ್ಳುತ್ತಿದ್ದನು.

ಸಲುಗೆ ಬೆಳೆಯುತ್ತಿದ್ದಂತೆ ಪ್ರೀತಿ ಹೆಸರಿನ ಸುಳ್ಳು ಬಲೆಯನ್ನು ಬೀಸುತ್ತಿದ್ದನು. ನಂತರ ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು ಎಂದು ವರದಿಯಾಗಿದೆ. ಪುಲಕೇಶಿ ನಗರ ಪೊಲೀಸರು ತಮ್ಮ ತನಿಖೆಯನ್ನು ಮುಂದುವರಿಸಿದ್ದು, ಮತ್ತಷ್ಟು ಸ್ಪೋಟಕ ವಿಷಯಗಳು ಬಯಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

About The Author

Leave a Reply